Isaiah 66:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
Kannada BSI Bible 2016
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.
Kannada Bible (KNCL) BSI 2016
ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”