Isaiah 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
Kannada BSI Bible 2016
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.
Kannada Bible (KNCL) BSI 2016
ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.