Isaiah 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.
Kannada BSI Bible 2016
ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು.
Kannada Bible (KNCL) BSI 2016
ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.