Isaiah 7:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಂಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”
Kannada BSI Bible 2016
ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.
Kannada Bible (KNCL) BSI 2016
ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”