Isaiah 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಸಮಯದಲ್ಲಿ ಯೆಹೋವನು ನೊಣಗಳನ್ನು ಕರೆಯುವನು. ಆ ನೊಣಗಳು ಈಗ ಈಜಿಪ್ಟಿನ ನದಿಗಳ ಸಮೀಪದಲ್ಲಿವೆ. ಯೆಹೋವನು ದುಂಬಿಗಳನ್ನು ಕರೆಯುವನು. ಆ ದುಂಬಿಗಳು ಈಗ ಅಶ್ಶೂರ್ ದೇಶದಲ್ಲಿವೆ. ಈ ವೈರಿಗಳು ನಿಮ್ಮ ದೇಶಕ್ಕೆ ಬಂದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.
Kannada BSI Bible 2016
ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಲ್ಲಿನ ನೊಣಗಳೂ ಅಶ್ಶೂರ್‍ದೇಶದ ತುಂಬಿಗಳೂ ಬರಲೆಂದು ಯೆಹೋವನು ಸಿಳ್ಳುಹಾಕುವನು.
Kannada Bible (KNCL) BSI 2016
ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.