Isaiah 7:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುಭೂಮಿಯ ಹಳ್ಳಗಳ ಸಮೀಪದಲ್ಲಿರುವ ಬಂಡೆಯ ಸಂದುಗೊಂದುಗಳಲ್ಲಿಯೂ ನೀರಿನ ಬಾವಿಗಳ ಬಳಿಯಲ್ಲಿರುವ ಮುಳ್ಳುಪೊದೆಗಳಲ್ಲಿಯೂ ಶಿಬಿರ ಹಾಕಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಬಂದು ಕಡಿದಾದ ಕಣಿವೆಗಳಲ್ಲಿಯೂ, ಬಂಡೆಗಳ ಸಂದುಗೊಂದುಗಳಲ್ಲಿಯೂ, ಎಲ್ಲಾ ಮುಳ್ಳು ಪೊದೆಗಳಲ್ಲಿಯೂ, ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
Kannada BSI Bible 2016
ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವೆಲ್ಲಾ ಬಂದು ಕಡಿದಾದ ಡೊಂಗರಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಎಲ್ಲಾ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಮುತ್ತಿಕೊಳ್ಳುವವು.
Kannada Bible (KNCL) BSI 2016
ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.