Isaiah 7:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ರೋಮವನ್ನೂ ಗಡ್ಡವನ್ನೂ ಬೋಳಿಸಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು.
Kannada BSI Bible 2016
ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.
Kannada Bible (KNCL) BSI 2016
ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.