Isaiah 7:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.
Kannada BSI Bible 2016
ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಕರೆಯುವ ಹೆಚ್ಚು ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರುಜೇನುಗಳನ್ನೇ ಉಂಡು ಜೀವಿಸುವನು.
Kannada Bible (KNCL) BSI 2016
ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.