Isaiah 7:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ, ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
Kannada BSI Bible 2016
ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು.
Kannada Bible (KNCL) BSI 2016
ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.