Isaiah 7:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಶವು ಕಾಡಾಗುವುದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಶವೆಲ್ಲಾ ಮುಳ್ಳು ಮತ್ತು ದತ್ತೂರಿಗಳ ಪೊದೆಯಾಗಿರುವುದಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
Kannada BSI Bible 2016
ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವೆಲ್ಲಾ ಮುಳ್ಳುಪೊದೆಯಾಗಿರುವದರಿಂದ ಜನರು ಬಿಲ್ಲುಬಾಣಗಳೊಡನೆ ಸಂಚರಿಸುವರು.
Kannada Bible (KNCL) BSI 2016
ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.