Isaiah 7:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು ಯೆಶಾಯನಿಗೆ, “ನೀನೂ ನಿನ್ನ ಮಗನಾದ ಶೆಯಾರ್ ಯಾಶೂಬನೂ ಆಹಾಜನ ಬಳಿಗೆ ಹೋಗಿ ಮಾತನಾಡಬೇಕು. ನೀರು ಮೇಲಿನ ಕೊಳಕ್ಕೆ ಸೇರುವ ಸ್ಥಳಕ್ಕೆ ಹೋಗು. ಇದು ಅಗಸನ ಹೊಲಕ್ಕೆ ಹೋಗುವ ಮಾರ್ಗದಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,
Kannada BSI Bible 2016
ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು - ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲಿವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು
Kannada Bible (KNCL) BSI 2016
ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು: “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.