Isaiah 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು, “ನಾವು ಹೋಗಿ ಯೆಹೂದಕ್ಕೆ ವಿರುದ್ಧವಾಗಿ ಯುದ್ಧ ಮಾಡೋಣ. ಯೆಹೂದ ರಾಜ್ಯವನ್ನು ನಾವಿಬ್ಬರೂ ಭಾಗ ಮಾಡಿಕೊಳ್ಳೋಣ ಮತ್ತು ಟಾಬೇಲನ ಮಗನನ್ನು ಯೆಹೂದದ ಹೊಸ ಅರಸನಾಗಿ ಮಾಡೋಣ ಎಂದು ಮಾತಾಡಿಕೊಳ್ಳುತ್ತಿದ್ದಾರೆ.”“‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
Kannada BSI Bible 2016
ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ ಒಳಗೆ ನುಗ್ಗಿಕೊಂಡು ಹೋಗಿ ಅದರಲ್ಲಿ ಟಾಬೇಲನ ಮಗನಿಗೆ ಪಟ್ಟಕಟ್ಟೋಣವೆಂದುಕೊಂಡದ್ದರಿಂದ
Kannada Bible (KNCL) BSI 2016
‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.