Isaiah 8:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನಮ್ಮನ್ನು ರಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.
Kannada BSI Bible 2016
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
Kannada Bible (KNCL) BSI 2016
ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.