Isaiah 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರೆಕ್ಯನ ಮಗನಾದ ಜೆಕರ್ಯ.) ನಾನು ಆ ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.
Kannada BSI Bible 2016
ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ನೀನು ಹೀಗೆ ಬರೆದದ್ದಕ್ಕೆ] ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು ಎಂದು ಹೇಳಿದನು.
Kannada Bible (KNCL) BSI 2016
ನೀನು ಹೀಗೆ ಬರೆದುದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಕನ ಮಗನಾದ ಜೆಕರ್ಯ - ಈ ನಂಬಿಗಸ್ತರನ್ನು ಸಾಕ್ಷಿಗಳಾಗಿ ಕರೆದುಕೊ” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.