Isaiah 8:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
Kannada BSI Bible 2016
ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಘೋರಕಷ್ಟಕ್ಕೊಳಗಾಗಿ ಹಸಿದುಕೊಂಡು ದೇಶದಲ್ಲಿ ಅಲೆಯುವರು; ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ ತಮ್ಮ ದೇವರನ್ನೂ ಶಪಿಸುವರು;
Kannada Bible (KNCL) BSI 2016
ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.