Isaiah 9:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂದಿನ ಕಾಲದಲ್ಲಿ, ಜೆಬುಲೂನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.
Kannada BSI Bible 2016
ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್‌ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ.
Kannada Bible (KNCL) BSI 2016
ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.