Isaiah 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.
Kannada BSI Bible 2016
ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದಾರುಗಳನ್ನು ಹಾಕುವೆವು ಎಂದು ಗರ್ವದಿಂದಲೂ ಉಬ್ಬಟೆಯಿಂದಲೂ ಹೇಳಿಕೊಳ್ಳುವ ಎಫ್ರಾಯೀಮ್ಯರು ಸಮಾರ್ಯದ ನಿವಾಸಿಗಳು ಇವರೆಲ್ಲರಿಗೂ ಆ ಮಾತು ಗೊತ್ತಾಗುವದು.
Kannada Bible (KNCL) BSI 2016
ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,”