Isaiah 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
Kannada BSI Bible 2016
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ತಾಲತೃಣಗಳನ್ನೂ ಒಂದೇ ದಿನದಲ್ಲಿ ಕಡಿದುಬಿಟ್ಟಿದ್ದಾನೆ.
Kannada Bible (KNCL) BSI 2016
ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು.