Isaiah 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
Kannada BSI Bible 2016
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.
Kannada Bible (KNCL) BSI 2016
ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.