Isaiah 9:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.
Kannada BSI Bible 2016
ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.
Kannada Bible (KNCL) BSI 2016
ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.