Isaiah 9:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು. ಎಡಗಡೆಯಲ್ಲಿರುವುದನ್ನು ತಿಂದರೂ ತೃಪ್ತಿಯಾಗುವುದಿಲ್ಲ. ಒಬ್ಬೊಬ್ಬನು ತನ್ನ ತೋಳಿನ ಮಾಂಸವನ್ನೇ ತಿನ್ನುವನು.
Kannada BSI Bible 2016
ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು [ತಿಂದರೂ] ಹಸಿದೇ ಇರುತ್ತಾರೆ; ಎಡಗಡೆಯಲ್ಲಿರುವದನ್ನು ಉಂಡರೂ ತೃಪ್ತಿಗೊಳ್ಳರು; ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುತ್ತಾನೆ.
Kannada Bible (KNCL) BSI 2016
ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.