Isaiah 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
Kannada BSI Bible 2016
ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ, ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ; ಸುಗ್ಗಿಕಾಲದಲ್ಲಿ ಜನರು ಹರ್ಷಿಸುವ ಹಾಗೂ ಕೊಳ್ಳೆಯನ್ನು ಹಂಚಿಕೊಳ್ಳುವವರು ಹೆಚ್ಚಳಪಡುವ ಹಾಗೂ ನಿನ್ನ ಮುಂದೆ ಆನಂದಿಸುತ್ತಾರೆ.
Kannada Bible (KNCL) BSI 2016
ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.