Isaiah 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
Kannada BSI Bible 2016
ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
Kannada Bible (KNCL) BSI 2016
ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.