Isaiah 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
Kannada BSI Bible 2016
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.
Kannada Bible (KNCL) BSI 2016
ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.