Isaiah 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.
Kannada BSI Bible 2016
ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನು ಯಾಕೋಬ್ಯರಿಗೆ ವಿರುದ್ಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರಿಗೆ ತಗಲಿತು.
Kannada Bible (KNCL) BSI 2016
ಯಕೋಬ ಕುಲದವರಿಗೆ‍ ಶಾಪದ ಸಂದೇಶ ಒಂದನ್ನು ಸರ್ವೇಶ್ವರ ಕಳುಹಿಸಿರುವರು. ಅದು ಇಸ್ರಯೇಲರ ಮೇಲೆ ಎರಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯಾಕೋಬನಿಗೆ ವಿರೋಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದರು, ಅದು ಇಸ್ರಾಯೇಲರಿಗೆ ತಗುಲಿತು.