James 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
Kannada BSI Bible 2016
ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.
Kannada Bible (KNCL) BSI 2016
ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.