James 1:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
Kannada BSI Bible 2016
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.
Kannada Bible (KNCL) BSI 2016
ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.