James 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
Kannada BSI Bible 2016
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ - ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ.
Kannada Bible (KNCL) BSI 2016
ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.