James 1:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
Kannada BSI Bible 2016
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ.
Kannada Bible (KNCL) BSI 2016
ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.