James 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
Kannada BSI Bible 2016
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.
Kannada Bible (KNCL) BSI 2016
ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.