James 1:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
Kannada BSI Bible 2016
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;
Kannada Bible (KNCL) BSI 2016
ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.