James 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ವ್ಯಕ್ತಿಯ ಕೋಪವು ದೇವರು ಅಪೇಕ್ಷಿಸಿದಂತೆ ಯೋಗ್ಯ ಜೀವನವನ್ನು ನಡೆಸಲು ಅವನಿಗೆ ಸಹಾಯಕವಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
Kannada BSI Bible 2016
ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.
Kannada Bible (KNCL) BSI 2016
ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.