James 1:21 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
Kannada BSI Bible 2016
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.