James 1:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
Kannada BSI Bible 2016
ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.
Kannada Bible (KNCL) BSI 2016
ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.