James 1:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ ‘ಭಕ್ತಿ’ಗೆ ಬೆಲೆಯಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
Kannada BSI Bible 2016
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.
Kannada Bible (KNCL) BSI 2016
ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.