James 1:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
Kannada BSI Bible 2016
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Kannada Bible (KNCL) BSI 2016
ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.