James 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
Kannada BSI Bible 2016
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.
Kannada Bible (KNCL) BSI 2016
ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.