James 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
Kannada BSI Bible 2016
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು.
Kannada Bible (KNCL) BSI 2016
ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.