James 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
Kannada BSI Bible 2016
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ.
Kannada Bible (KNCL) BSI 2016
ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?