James 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ನೆಂದು ಕರೆಯಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
Kannada BSI Bible 2016
ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಶಾಸ್ತ್ರದ ಮಾತು ಹೀಗೆ ನೆರವೇರಿತು, ಮತ್ತು ದೇವರ ಸ್ನೇಹಿತನೆಂಬ ಹೆಸರು ಅವನಿಗೆ ಉಂಟಾಯಿತು.
Kannada Bible (KNCL) BSI 2016
ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.