James 2:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
Kannada BSI Bible 2016
ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ರೀತಿಯಾಗಿ ಸೂಳೆಯಾದ ರಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿವಂತಳೆಂಬ ನಿರ್ಣಯವನ್ನು ಹೊಂದಿದಳಲ್ಲವೇ.
Kannada Bible (KNCL) BSI 2016
ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?