James 2:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,
Kannada BSI Bible 2016
ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಶೋಭಾಯಮಾನವಾದ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಮರ್ಯಾದೆಯಿಂದ ನೋಡಿ ಅವನಿಗೆ - ನೀವು ಇಲ್ಲಿ ಈ ಸುಖಾಸನದ ಮೇಲೆ ಕೂತುಕೊಳ್ಳಿರಿ ಎಂತಲೂ ಆ ಬಡಮನುಷ್ಯನಿಗೆ - ನೀನು ಅಲ್ಲಿ ನಿಂತುಕೋ, ಇಲ್ಲವೆ ನನ್ನ ಕಾಲ್ಮಣೆಯ ಹತ್ತಿರ ನೆಲದ ಮೇಲೆ ಕೂತುಕೋ ಎಂತಲೂ ಹೇಳಿದರೆ
Kannada Bible (KNCL) BSI 2016
ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, “ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ,” ಎಂತಲೂ ಆ ಬಡವನಿಗೆ, “ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ,” ಎಂತಲೂ ಹೇಳಿದರೆ,