James 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
Kannada BSI Bible 2016
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?
Kannada Bible (KNCL) BSI 2016
ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?