James 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.
Kannada BSI Bible 2016
ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಬಿಟ್ಟು ಪಕ್ಷಪಾತ ತೋರಿಸುವವರಾಗಿದ್ದರೆ ನೀವು ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದಿಂದ ತೀರ್ಮಾನಿಸಲ್ಪಡುತ್ತೀರಿ.
Kannada Bible (KNCL) BSI 2016
ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.