James 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
Kannada BSI Bible 2016
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.
Kannada Bible (KNCL) BSI 2016
ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.