James 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
Kannada BSI Bible 2016
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
Kannada Bible (KNCL) BSI 2016
ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.