James 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.
Kannada BSI Bible 2016
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧವಾದದ್ದು, ಪ್ರಾಕೃತ ಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
Kannada Bible (KNCL) BSI 2016
ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.