James 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
Kannada BSI Bible 2016
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.
Kannada Bible (KNCL) BSI 2016
ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.