James 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ಆ ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
Kannada BSI Bible 2016
ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಡಗುಗಳನ್ನು ನೋಡಿರಿ. ಅವು ಬಹು ದೊಡ್ಡವು, ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ನಡಿಸುವವನು ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.
Kannada Bible (KNCL) BSI 2016
ಅಂತೆಯೇ, ಹಡಗು ಎಷ್ಟೇ ದೊಡ್ಡದಿರಲಿ, ಎಂತಹ ಬಿರುಗಾಳಿಯ ಬಡಿತಕ್ಕೇ ಸಿಕ್ಕಿರಲಿ, ಕೇವಲ ಒಂದು ಚಿಕ್ಕ ಚುಕ್ಕಾಣಿಯಿಂದ ನಾವಿಕನು ತನಗೆ ಇಷ್ಟಬಂದ ಕಡೆಗೆ ಅದನ್ನು ತಿರುಗಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ.