James 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
Kannada BSI Bible 2016
ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಜಾತಿಯು ಸಕಲಜಾತಿಯ ಮೃಗ ಪಕ್ಷಿ ಕ್ರಿವಿು ಜಲಚರಗಳನ್ನೂ ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
Kannada Bible (KNCL) BSI 2016
ಸಕಲ ಜಾತಿಯ ಪ್ರಾಣಿಪಕ್ಷಿಗಳನ್ನೂ ಹರಿದಾಡುವ ಜಂತುಗಳನ್ನೂ ಜಲಜೀವಿಗಳನ್ನೂ ಮಾನವ ಪಳಗಿಸಬಲ್ಲನು; ಪಳಗಿಸಿಯೂ ಇದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ.